ತೇರಕಣಾಂಬಿ: ಕರ್ನಾಟಕ ರಾಜ್ಯ ಮೂಲಭೂತ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಮಿತಿಯ ಕೇಂದ್ರ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಾಬಾ ಸಾಹೇಬ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಮಹನೀಯರ ಆದರ್ಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಲಕ್ಷ್ಮೀ ಮಹೇಶ್ ಅವರು ಮಾತನಾಡಿ, “ಪ್ರಸ್ತುತ ಸಂಕೀರ್ಣ ಕಾಲಘಟ್ಟದಲ್ಲಿ ಅಂಬೇಡ್ಕರ್ ಹಾಗೂ ಬಸವಣ್ಣನವರ ವಿಚಾರಧಾರೆಗಳು ನಮಗೆ ದಾರಿದೀಪವಾಗಬೇಕು. ಪೋಷಕರು…
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದ ಕೆರೆಯಲ್ಲಿ ಹೂಳು ತೆಗೆಯುವ ಸಂದರ್ಭದಲ್ಲಿ ಪುರಾತನ ಕಾಲದ ಬಸವಣ್ಣ ಹಾಗೂ ನಂದಿಯ ವಿಗ್ರಹಗಳು ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ದೈವೀ ಕಳೆ ತುಂಬಿದೆ. ಗ್ರಾಮದ ಹೊರವಲಯದ ಬಾಳೆ ಕೆರೆಯಲ್ಲಿ ಮಣ್ಣು ತೆಗೆಯುತ್ತಿದ್ದಾಗ ಈ ಅಪರೂಪದ ಶಿಲ್ಪಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಲು ಸುತ್ತಮುತ್ತಲಿನ ಹಳ್ಳಿಗಳಿಂದ ಜನಸಾಗರವೇ ಹರಿದುಬರುತ್ತಿದೆ. ಬೇಸಿಗೆ ಆರಂಭವಾಗಿರುವುದರಿಂದ ದೂದಿಹಳ್ಳಿ ಗ್ರಾಮದ ರೈತರು ತಮ್ಮ ಜಮೀನುಗಳಿಗೆ ಫಲವತ್ತಾದ ಮಣ್ಣು ಒಯ್ಯಲು ಕೆರೆಯಲ್ಲಿ ಹೂಳು ತೆಗೆಯುವ ಕಾರ್ಯ ಕೈಗೆತ್ತಿಕೊಂಡಿದ್ದರು. ಜೆಸಿಬಿ ಯಂತ್ರದ…