ಆನೇಕಲ್: ತಾಲೂಕಿನ ಬೆಟ್ಟದಾಸನಪುರ ಗ್ರಾಮವು ಮತ್ತೊಮ್ಮೆ ಸಾಂಪ್ರದಾಯಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಇಲ್ಲಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಗ್ಗೂಡಿ ಆಚರಿಸುವ ಮೂಲಕ ಭಾವೈಕ್ಯತೆಯ ಹಬ್ಬವಾಗಿ ವೈಭವದಿಂದ ಜರುಗಿತು. ಈ ಜಾತ್ರೆಯ ವಿಶೇಷವೆಂದರೆ, ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವವನ್ನು ಮುಸ್ಲಿಂ ಸಮುದಾಯದ ಬಾಂಧವರು ಭಕ್ತಿಯಿಂದ ಆಯೋಜಿಸುವುದು. ಗ್ರಾಮದ ಎಲ್ಲಾ ಮುಸ್ಲಿಮರು ಒಗ್ಗೂಡಿ ಪಲ್ಲಕ್ಕಿ ಉತ್ಸವವನ್ನು ನಡೆಸಿ, ದೇವರಿಗೆ ಗೌರವ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು….
ಚಿಕ್ಕಮಗಳೂರು: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಂಭ್ರಮದ ನಡುವೆ ಸುನಾಮಿಯಂತೆ ಬಂದ ಕಾರು: ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅದ್ದೂರಿ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮೆರವಣಿಗೆಯಲ್ಲಿದ್ದ ಜನರ ಗುಂಪಿಗೆ…