ಆನೇಕಲ್: ತಾಲ್ಲೂಕಿನ ವಿವಿಧೆಡೆ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಗ್ನಿ ಅವಘಡಗಳಲ್ಲಿ ಎರಡು ಗುಜರಿ ಗೋದಾಮುಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಕರಕಲಾಗಿವೆ. ಆನೇಕಲ್ ಸಮೀಪದ ಗೌರೇನಹಳ್ಳಿ ಬಳಿಯ ಕಕ್ಕಮಲ್ಲೇಶ್ವರ ಬೆಟ್ಟ-ಸಿದ್ದನಪಾಳ್ಯ ರಸ್ತೆಯಲ್ಲಿರುವ ಬಾಬು ಎಂಬುವರಿಗೆ ಸೇರಿದ ಗುಜರಿ ಗೋದಾಮಿನಲ್ಲಿ ಬುಧವಾರ ಮಧ್ಯಾಹ್ನ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನಲ್ಲಿ ಪ್ಲಾಸ್ಟಿಕ್ ಸೇರಿದಂತೆ ದಹನಕಾರಿ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲೇ ಗೋದಾಮಿನಾದ್ಯಂತ ವ್ಯಾಪಿಸಿತು. ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಆಕಾಶಕ್ಕೆ ಚಿಮ್ಮಿದ್ದು, ಸುತ್ತಮುತ್ತಲ ನಿವಾಸಿಗಳಲ್ಲಿ…
ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಧೀಮಂತ ವ್ಯಕ್ತಿತ್ವ, ಖ್ಯಾತ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿರುವ ಅನುಪಮ ಹಾಗೂ ಮಹತ್ತರ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು ಈ ಅತ್ಯುನ್ನತ ಗೌರವವನ್ನು ನೀಡಿದೆ. ಕರ್ನಾಟಕ ಸರ್ಕಾರದ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ₹10 ಲಕ್ಷ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಶೀಘ್ರದಲ್ಲೇ ನಡೆಯಲಿರುವ ಅಧಿಕೃತ ಸಮಾರಂಭದಲ್ಲಿ ಸರ್ಕಾರವು…