ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಗ್ರಾಮದ ನಿವಾಸಿಗಳಾದ ವೆಂಕಟರಮಣಗೌಡ ಮತ್ತು ಸಣ್ಣತಿಮ್ಮೇಗೌಡ ಎಂಬುವವರಿಗೆ ಸೇರಿದ ಮನೆಗಳಲ್ಲಿ ಈ ಅವಘಡ ಸಂಭವಿಸಿದೆ. ಭಾರತ್ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮನೆಗೆ ಆವರಿಸಿದೆ. ನಿನ್ನೆ ಸಂಜೆ ಸಂಭವಿಸಿದ ಈ ಘಟನೆಯು ತಡವಾಗಿ ಬೆಳಕಿಗೆ ಬಂದಿದೆ. ಈ ಭೀಕರ ಅಗ್ನಿ ಅವಘಡದಲ್ಲಿ ಮನೆಗಳಲ್ಲಿದ್ದ ಸುಮಾರು…
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಭೂಪಟದಲ್ಲಿ ಮುಂಚೂಣಿಯಲ್ಲಿರುವ ಹೊನ್ನಾವರ ತಾಲೂಕಿನ ಸುಂದರ ಕಾಸರಕೋಡ ಕಡಲತೀರವು ಸತತ ಆರನೇ ಬಾರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ‘ಬ್ಲೂ ಫ್ಲಾಗ್’ (Blue Flag) ಮಾನ್ಯತೆಯನ್ನು ಪಡೆದುಕೊಂಡು ದೇಶದ ಗಮನ ಸೆಳೆದಿದೆ. ಭಾನುವಾರ ಕಡಲತೀರದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಮಂಗಳ ಗೌರಿ ಭಟ್ ಅವರು ಅಧಿಕೃತವಾಗಿ ಬ್ಲೂ ಫ್ಲಾಗ್ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ ಕಾಸರಕೋಡ ಬೀಚ್ ವಿಶ್ವಮಟ್ಟದ ಗುಣಮಟ್ಟದ ಮಾನದಂಡಗಳನ್ನು ಕಾಪಾಡಿಕೊಂಡು ಬರುತ್ತಿರುವುದನ್ನು ಮತ್ತೊಮ್ಮೆ…