ಬೆಳಗಾವಿ: ನಗರದ ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬೆಳಗಾವಿ ಪೊಲೀಸರ ‘ಅಕ್ಕ ಪಡೆ’ ಸಕಾಲದಲ್ಲಿ ದಾಳಿ ನಡೆಸಿ ತಡೆಯುವಲ್ಲಿ ಯಶಸ್ವಿಯಾಗಿದೆ. ಬೆಳಗಾವಿ ನಗರದ ಶಹಪೂರದ ಶಾಸ್ತ್ರಿ ನಗರದ ನಿವಾಸಿಯಾದ 13 ವರ್ಷದ ಬಾಲಕಿಗೆ ಮೂಡಲಗಿ ಮೂಲದ ವ್ಯಕ್ತಿಯೊಂದಿಗೆ ವಿವಾಹ ಮಾಡಲು ಸಿದ್ಧತೆ ನಡೆಸಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಅಕ್ಕ ಪಡೆಯ ಸಿಬ್ಬಂದಿಗಳು ಜಂಟಿಯಾಗಿ ಬಾಲಕಿಯ ಮನೆಗೆ…
ಕಾರವಾರ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ದಿವ್ಯಶ್ರೀ ಸಿ.ಎಂ. ತಿಳಿಸಿದರು. ಗುರುವಾರ ಜಿಲ್ಲಾ ನ್ಯಾಯಾಲಯದ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ಹಂಚಿಕೊಂಡರು. ಆಗಸ್ಟ್ 21, 22 ಮತ್ತು 23ರಂದು ಮೂರು ದಿನಗಳ ಕಾಲ…