ಚನ್ನಪಟ್ಟಣ: ನಾಗರಹಾವು ಕಚ್ಚಿ ಚಿಕಿತ್ಸೆಗಾಗಿ ಬಂದಿದ್ದ ನಾಲ್ಕೂವರೆ ವರ್ಷದ ಬಾಲಕನಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ, ಬಾಲಕ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಏಪ್ರಿಲ್ 28ರಂದು ಸಂಜೆ 5:50ರ ಸುಮಾರಿಗೆ ಸಾತ್ವಿಕ್ ಎಂಬ ಬಾಲಕನಿಗೆ ನಾಗರಹಾವು ಕಚ್ಚಿತ್ತು. ತಕ್ಷಣ ಎಚ್ಚೆತ್ತ ಕುಟುಂಬಸ್ಥರು ಬಾಲಕನನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ…
ಕಾರವಾರ:ನಗರದ ಹಬ್ಬುವಾಡ ರಸ್ತೆಯಲ್ಲಿ ಕೆಶಿಪ್ (KSHIP) ಇಲಾಖೆಯು ನಡೆಸಿದ ವಿಚಿತ್ರ ಹಾಗೂ ಅವೈಜ್ಞಾನಿಕ ಕಾಮಗಾರಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಗೀತಾಂಜಲಿ ಚಿತ್ರಮಂದಿರದಿಂದ ಇಸ್ಕಾನ್ ಟೆಂಪಲ್‌ವರೆಗಿನ ಅತ್ಯುತ್ತಮ ಸ್ಥಿತಿಯಲ್ಲಿದ್ದ ಕಾಂಕ್ರೀಟ್ ರಸ್ತೆಯ ಮೇಲೆ ಏಕಾಏಕಿ ಡಾಂಬರು ಹಾಕುವ ಮೂಲಕ ಗುತ್ತಿಗೆದಾರರು ಸಾರ್ವಜನಿಕ ಹಣ ಪೋಲು ಮಾಡಲು ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಯಾವುದೇ ಮುನ್ಸೂಚನೆ ಅಥವಾ ಸಮರ್ಪಕ ಯೋಜನೆಯಿಲ್ಲದೆ ನಡೆಯುತ್ತಿದ್ದ ಈ ಕಾಮಗಾರಿಯನ್ನು ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಕೆಲಸ ತಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಗರಸಭೆ…