ರಾಯಚೂರು: “ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ, ರಾಜ್ಯ ಸರ್ಕಾರದ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ನಮಗೆ ಗೊತ್ತಿಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಯಚೂರಿನ ಲಿಂಗಸಗೂರಿನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ ಹಾಗೂ ಕೇರಳ, ಪಂಜಾಬ್‌ನಲ್ಲೂ ಇದೇ ಪರಿಸ್ಥಿತಿ ಇದೆ ಎಂಬ ಪ್ರಧಾನಿಯವರ ಹೇಳಿಕೆಯನ್ನು ತಳ್ಳಿಹಾಕಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ ಎಂಬ ವಿಶ್ವಾಸವನ್ನು…
ಬೆಳಗಾವಿ: ನಗರದಲ್ಲಿ ಸರಣಿ ಮನೆಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಎಪಿಎಂಸಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ದೇವೆಂದ್ರ ಉರ್ಫ ಡೇಬ್ಯಾ ರಮೇಶ ವಾಘಮೋರೆ (39), ಸಚೀನ ದತ್ತಾತ್ರೇಯ ಗೌಳಿ (39) ಮತ್ತು ಕಪೀಲ ಉರ್ಫ ಅಪ್ಪಾ ಭಜರಂಗ ಜಾಧವ (23) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಒಟ್ಟು 4.71 ಲಕ್ಷ ರೂಪಾಯಿ ಮೌಲ್ಯದ ಮಾಲನ್ನು…