ಬೆಂಗಳೂರು: ಕೆಂಪೇಗೌಡ ನಗರದ ಐತಿಹಾಸಿಕ ಹಿನ್ನೆಲೆಯುಳ್ಳ ಕೆಂಪಾಂಬುದಿ ಕೆರೆ ಇಂದು ಅಕ್ಷರಶಃ ಅವ್ಯವಸ್ಥೆಯ ಆಗರವಾಗಿದ್ದು, ಪುಂಡ-ಪೋಕರಿಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಕೆರೆಯ ಸುತ್ತಮುತ್ತಲಿನ ಪರಿಸರದಲ್ಲಿ ಅನೈತಿಕ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಈಗ ಪ್ರಶ್ನಾರ್ಥಕ ಚಿಹ್ನೆಯಾಗಿದೆ. ಕೆರೆಯ ದುಸ್ಥಿತಿಯ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಶಿವಕುಮಾರ್ ನಾಯ್ಕ್ ಅವರು ಕೆರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅಧಿಕಾರಿಗಳ ನಿರ್ಲಕ್ಷ್ಯವೇ ಕೆರೆಯ ಈ ದುಃಸ್ಥಿತಿಗೆ ನೇರ ಕಾರಣ ಎಂದು…
ಚಿಂತಾಮಣಿ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯೊಬ್ಬಳು ಬಲಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದಾಗಿ 24 ವರ್ಷದ ಯುವತಿ ಸಾವನ್ನಪ್ಪಿದ್ದು, ಕುಟುಂಬಸ್ಥರು ರಾತ್ರಿ ಇಡೀ ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ನಿವಾಸಿ ಓಬಳೇಶ್ ಎಂಬವರ ಪತ್ನಿ ನರ್ಮದಾ (24) ಮೃತ ದುರ್ದೈವಿ. ಎರಡು ತಿಂಗಳ ಹಿಂದಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ ಅವರಿಗೆ, ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸೆ…