ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ವರುಣದೇವ ಇದೀಗ ರಾಜ್ಯದಲ್ಲಿ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ. ಕರಾವಳಿ ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮೇಲ್ಮೈ ಸುಳಿಗಳಿ ಉಂಟಾಗಿರುವ ಹಿನ್ನೆಲೆಯಲ್ಲಿ, ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಇಂದಿಗೆ ಆರೆಂಜ್ ಅಲರ್ಟ್ ಹಾಗೂ ಮುಂದಿನ ಮೂರು ದಿನಗಳ…
ನೆಲಮಂಗಲ (ದಾಬಸ್ಪೇಟೆ):ಇತ್ತೀಚಿನ ದಿನಗಳಲ್ಲಿ ಅನೈತಿಕ ಸಂಬಂಧ ಹಾಗೂ ಸಾಮಾಜಿಕ ಜಾಲತಾಣಗಳ ವ್ಯಾಮೋಹಕ್ಕೆ ಬಿದ್ದು ಹೆತ್ತ ಕರುಳು ಮತ್ತು ಕಟ್ಟಿಕೊಂಡ ಗಂಡನನ್ನು ಬಿಟ್ಟು ಪರಾರಿಯಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಹಾಗೂ ಕರುಣಾಜನಕ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ತಾಯಿ ತನ್ನ ಪ್ರಿಯಕರನ ಜೊತೆ ಮನೆ ಬಿಟ್ಟು ಓಡಿಹೋಗಿರುವುದು ಇಡೀ ಕುಟುಂಬವನ್ನು ಬೀದಿಗೆ ತಂದು ನಿಲ್ಲಿಸಿದೆ. ಸ್ಥಳೀಯ ನಿವಾಸಿಯಾದ ಮಂಜುಳಾ ಎಂಬುವವರು ತಮ್ಮ ಮಗಳಾದ ಮೋನಿಕಾಳನ್ನು…