ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಮೇ 25ರಂದು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪಡೀಲ್ ಬಜಾಲ್ ನಂತೂರು ಬಳಿಯ ನಿವಾಸಿಯಾದ ಮೊಹಮ್ಮದ್ ಇಬ್ರಾಹಿಂ ಸಿನಾನ್ ಅಲಿಯಾಸ್ ಚಿನ್ನು (21) ಬಂಧಿತ ಆರೋಪಿಯಾಗಿದ್ದಾನೆ. ಈತನು ಮೃತ ರೌಡಿಶೀಟರ್ “ಟೊಪ್ಪಿ ನೌಫಾಲ್” ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಮಾರ್ಚ್…
ವಿಜಯಪುರ: ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಭಾರಿ ಹೈಡ್ರಾಮಾ ಸೃಷ್ಟಿಸಿರುವ ವಿಲಕ್ಷಣ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಯಾದ ಶ್ರೀಶೈಲ ನಾಗಪ್ಪ ರಾಮತೀರ್ಥ ಎಂಬಾತನೇ ಗ್ರಾಮಸ್ಥರು ಹಾಗೂ ಪೊಲೀಸರಿಗೆ ಬೆವರಿಳಿಸಿದ ಕಿರಿಕ್ ಯುವಕ. ವಯಸ್ಸು ಮೀರುತ್ತಿದ್ದರೂ ತನಗೆ ಮದುವೆ ಮಾಡಲು ಪೋಷಕರು ಸರಿಯಾದ ಹೆಣ್ಣು ಹುಡುಕುತ್ತಿಲ್ಲ ಹಾಗೂ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಬೇಸರದಿಂದ ಶ್ರೀಶೈಲ ದಿಢೀರನೆ ಗ್ರಾಮದ ಮೊಬೈಲ್ ಟವರ್ ಏರಿದ್ದಾನೆ….