ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬರೋಬ್ಬರಿ 4,500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ತನಿಖೆಯ ವೇಳೆ ಸಂಸ್ಥೆಯು ನಡೆಸಿರುವ ಕೋಟಿ ಕೋಟಿ ರೂಪಾಯಿಯ ವಂಚನೆ ಸಾಕ್ಷ್ಯ ಸಮೇತ ಸಾಬೀತಾಗಿದೆ ಎಂದು ಸಿಐಡಿ ಡಿಐಜಿಪಿ ಡಾ. ಭೀಮಾಶಂಕರ್ ಗುಳೇದ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸ್ಫೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮೇಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಜಂಟಿ ದಾಳಿ…
ತುಮಕೂರು: ತುಮಕೂರಿನಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಪಾಕಿಸ್ತಾನ ಮೂಲದ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಆರೋಪಿ, ದಾವಣಗೆರೆಯ ಜಮೀರ್ ಖಾನ್ ಎಂಬಾತನನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಯಶಸ್ವಿಯಾಗಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ದಾವಣಗೆರೆಯ ಬೀಡಿ ಲೇಔಟ್ ನಿವಾಸಿ ಜಮೀರ್ ಖಾನ್ ಎಂದು ಗುರುತಿಸಲಾಗಿದೆ. ಈತ ವಿವಿಧ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ….