ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಜಮೀನುಗಳಿಗೆ ಕಾಡುಪ್ರಾಣಿಗಳು ಲಗ್ಗೆ ಇಡುವುದು ಮುಂದುವರಿದಿದ್ದು, ತಾಲೂಕಿನ ಮಳಲಿ ಗ್ರಾಮದಲ್ಲಿ ಕಾಡುಹಂದಿ ಹಾಗೂ ಜಿಂಕೆಗಳ ಹಿಂಡು ರಾತ್ರೋರಾತ್ರಿ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆ. ಹೆಗ್ಗಡದೇವನಕೋಟೆ ತಾಲೂಕಿನ ಮಳಲಿ ಗ್ರಾಮದ ನಿವಾಸಿ, ಶ್ರಮಜೀವಿ ರೈತ ಲೋಕೇಶ್ ಎಂಬುವವರಿಗೆ ಸೇರಿದ 3 ಎಕರೆ ಜಮೀನಿನಲ್ಲಿ ಈ ಘೋರ ಘಟನೆ ಸಂಭವಿಸಿದೆ. ಪ್ರಸ್ತುತ ಮಳೆ ಅಭಾವದ ತೀವ್ರ ಸಂಕಷ್ಟದ ನಡುವೆಯೂ ರೈತ ಲೋಕೇಶ್ ಅವರು ಸಾಲಸೋಲ…
ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಭೂಮಾಫಿಯಾಗೆ ಜಿಲ್ಲಾಡಳಿತವು ಭರ್ಜರಿ ಶಾಕ್ ನೀಡಿದೆ. ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅವರ ಖುದ್ದು ನೇತೃತ್ವದಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಒತ್ತುವರಿಯಾಗಿದ್ದ ಬರೋಬ್ಬರಿ 23 ಕೋಟಿ 33 ಲಕ್ಷ ರೂ. ಮೌಲ್ಯದ 6 ಎಕರೆ 0.07 ಗುಂಟೆ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡಗಳು ಭಾನುವಾರ ಏಕಕಾಲದಲ್ಲಿ ತಮ್ಮ…