ಮೈಸೂರು: ಯುವಕನೊಬ್ಬನ ನಿರಂತರ ಬ್ಲ್ಯಾಕ್‌ಮೇಲ್ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಮನಕಲಕುವ ಘಟನೆ ಮೈಸೂರು ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ರಕ್ಷಿತಾ, ಆಕೆಯ ತಾಯಿ ನಾಗರತ್ನ ಹಾಗೂ ತಂದೆ ಶಿವಣ್ಣ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಸಾವಿಗೂ ಮುನ್ನ ಮೂವರೂ ಸೇರಿ ತಮ್ಮ ಸಾವಿಗೆ ಕಾರಣವಾದ ಕಿರಾತಕನ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಮೃತ ರಕ್ಷಿತಾಗೆ ಇತ್ತೀಚೆಗಷ್ಟೇ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು….
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕೋಣಂದೂರು ಮೂಲದ ಸುಧಾಕರ ಆಚಾರಿ (೫೬) ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಕೃಷಿಕನಾಗಿದ್ದು, ಇದರ ಜೊತೆಗೆ ಬಡಗಿ (Carpentry) ಕೆಲಸವನ್ನೂ ಮಾಡಿಕೊಂಡಿದ್ದ ಎನ್ನಲಾಗಿದೆ. ಆರೋಪಿ ಸುಧಾಕರ ಆಚಾರಿ ಬಡಗಿ ಕೆಲಸದ ನೆಪದಲ್ಲಿ ಕಾನೂನುಬಾಹಿರವಾಗಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದಾನೆ…