ಹೈದರಾಬಾದ್: ತೆಲಂಗಾಣದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಭ್ರಷ್ಟಾಚಾರ ನಿಗ್ರಹ ದಳ (ACB), ಗುರುವಾರ ಹೈದರಾಬಾದ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಶಂಕಿರೆಡ್ಡಿ ಭೀಮ್ ರೆಡ್ಡಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭರ್ಜರಿ ದಾಳಿ ನಡೆಸಿದೆ. ದಾಳಿ ವೇಳೆ ಅಧಿಕಾರಿಗಳ ಕಣ್ಣು ಕುಕ್ಕುವಂತಹ ಬರೋಬ್ಬರಿ ₹200 ಕೋಟಿಗೂ ಅಧಿಕ ಮಾರುಕಟ್ಟೆ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಪೊಲೀಸ್ ಕಂಪ್ಯೂಟರ್ ಸೇವೆಗಳ (PCS) ವಿಭಾಗದಲ್ಲಿ ಡಿಎಸ್‌ಪಿಯಾಗಿರುವ ಭೀಮ್ ರೆಡ್ಡಿ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿ…
ದೊಡ್ಡಬಳ್ಳಾಪುರ: ತಾಲೂಕಿನ ಚೈತನ್ಯ ನಗರದ ದತ್ತಾತ್ರೇಯ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಲೇಔಟ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ವಿದ್ಯುತ್ ಅವಘಡಕ್ಕೆ ದಿನಸಿ ಅಂಗಡಿ ಮಾಲೀಕರೊಬ್ಬರು ಬಲಿಯಾಗಿದ್ದಾರೆ. ದೊಡ್ಡಬಳ್ಳಾಪುರದ ದೇವರಾಜನಗರ ನಿವಾಸಿ, ಅರಳುಮಲ್ಲಿಗೆ ಬಾಗಿಲು ಬಳಿ ದಿನಸಿ ಅಂಗಡಿ ನಡೆಸುತ್ತಿದ್ದ ಸತೀಶ್ (35) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಅರಳುಮಲ್ಲಿಗೆ ಬಾಗಿಲು ಪ್ರೌಢಶಾಲೆ ಸಮೀಪ ನಿರ್ಮಾಣವಾಗುತ್ತಿರುವ ಹೊಸ ಲೇಔಟ್‌ಗೆ ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ಸತೀಶ್ ಅವರು ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿ…