ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ಒಬ್ಬ ರೈತನ ಜಮೀನನ್ನು ಸಹ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದ ರೈತರು ಮುಕ್ತವಾಗಿ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಡದಿ ಯೋಜನೆಯ ಇತಿಹಾಸದ ಅಧಿಕೃತ ದಾಖಲೆಗಳನ್ನು ಪ್ರಸ್ತುತಪಡಿಸಿದ ಅವರು, ಸರ್ಕಾರ ಯಾರೊಬ್ಬರನ್ನೂ ಭೂಮಿ ನೀಡುವಂತೆ ಒತ್ತಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರಿಗೆ ಭೂಮಿ ನೀಡಲು ಇಷ್ಟವಿಲ್ಲವೋ ಅವರು ಕೃಷಿ ಮಾಡಿಕೊಂಡಿರಬಹುದು….
ಬೆಂಗಳೂರು: “ಕರ್ನಾಟಕ ಪೊಲೀಸರು ಏನು ಮಾಡುತ್ತಾರೆ ನೋಡೋಣ” ಎಂದು ಬಹಿರಂಗವಾಗಿಯೇ ಸವಾಲು ಹಾಕಿದ್ದ ಅಂತರರಾಷ್ಟ್ರೀಯ ಡ್ರಗ್ ಜಾಲದ ಕಿಂಗ್‌ಪಿನ್ ಸೇರಿದಂತೆ ನಾಲ್ವರು ಅಪಾಯಕಾರಿ ಪೆಡ್ಲರ್‌ಗಳನ್ನು ಹೆಬ್ಬಾಳ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 34 ಕೋಟಿ ರೂಪಾಯಿ ಮೌಲ್ಯದ 17 ಕೆಜಿ 580 ಗ್ರಾಂ ತೂಕದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧರಿಸಿ ಹೆಬ್ಬಾಳ ಪೊಲೀಸರು ದೇಶದ ವಿವಿಧೆಡೆ ದಾಳಿ ನಡೆಸಿ ಈ ಕೆಳಗಿನ ನಾಲ್ವರನ್ನು ಸದ್ಯ ಜೈಲಿಗಟ್ಟಿದ್ದಾರೆ: ಸೊಲೊಮನ್ ಟಚುಕ್ಯೂ…