ಬೆಂಗಳೂರು: ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಸಿ.ಕೆ. ಅಚ್ಚುಕಟ್ಟು (ಚನ್ನಮ್ಮನಕೆರೆ ಅಚ್ಚುಕಟ್ಟು) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಅಸ್ಸಾಂ ಮೂಲದ ದಂಪತಿಗಳಾದ ಸ್ವಪ್ನ (28) ಮತ್ತು ಮನೋಜ್ (28) ಎಂದು ಗುರುತಿಸಲಾಗಿದೆ. ಈ ದಂಪತಿಗೆ ಮೂರು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಪತಿ ಮನೋಜ್ ಬೆಂಗಳೂರಿನಲ್ಲಿ ಕಾರ್ಪೆಂಟರ್ (ಬಡಗಿ) ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ. …
ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕಾನೂನು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡುವ ಹಾಗೂ ಅವರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಇರುವ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ, ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ವಿಶೇಷ ‘ತೆರೆದ ಮನೆ’ (Open House) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಅರಮೇರಿ ಶಾಲೆಯ ಮಕ್ಕಳನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಠಾಣೆಯ ಅಧಿಕಾರಿಗಳು ಮಕ್ಕಳಿಗೆ ಆತ್ಮೀಯವಾಗಿ ಸ್ವಾಗತ ಕೋರಿ, ಪೊಲೀಸ್ ಠಾಣೆಯ ದೈನಂದಿನ ಕಾರ್ಯವೈಖರಿ, ಕಡತಗಳ ನಿರ್ವಹಣೆ ಹಾಗೂ ಬಳಸುವ ತಂತ್ರಜ್ಞಾನಗಳ ಕುರಿತು…