ವಿಜಯಪುರ: ಜಿಲ್ಲೆಯ ಕಗ್ಗೋಡ ಗ್ರಾಮದ ಸಮೀಪ ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ರಕ್ತಸ್ರಾವಗೊಂಡು ಮೃತಪಟ್ಟ ದುರ್ದೈವಿಯನ್ನು ವಿನೋದ್ ಗೌಡ ಪಾಟೀಲ್ (೨೮) ಎಂದು ಗುರುತಿಸಲಾಗಿದೆ. ವಿನೋದ್ ಗೌಡ ಅವರು ಚಲಾಯಿಸುತ್ತಿದ್ದ ಕಾರು ಕಗ್ಗೋಡ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬಂದ ವೇಗದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕ…
ಬೆಂಗಳೂರು: ಕನಕಪುರ ನೈಸ್ ರಸ್ತೆ (NICE Road) ಸೇತುವೆಯ ಮೇಲೆ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿರುವ ಭೀಕರ ಘಟನೆ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಕನಕಪುರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಾಗುವ ರಸ್ತೆಯನ್ನು ತಾತ್ಕಾಲಿಕವಾಗಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಘಟನೆ ಸಂಭವಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿರುವ ಸಂಚಾರ ಪೊಲೀಸರು ಹಾಗೂ ನೈಸ್ ರಸ್ತೆ ಪ್ರಾಧಿಕಾರದ ಸಿಬ್ಬಂದಿ, ಕ್ರೇನ್ ಮುಖಾಂತರ ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಪರ್ಯಾಯ ಮಾರ್ಗ ಬಳಸಿ:…