ಹಾವೇರಿ: ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಉನ್ನತ ಅಧಿಕಾರಿಗಳು ಹಾಗೂ ಗಣ್ಯರು ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಧೃಡೀಕರಣ ಪತ್ರ (ಪ್ರಮಾಣಪತ್ರ) ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, “ನಾಗರಿಕರಿಗೆ ಬಂದೂಕು ಸುರಕ್ಷತಾ ನಿಯಮಗಳು, ಜವಾಬ್ದಾರಿಯುತ ಬಳಕೆ ಹಾಗೂ ಕಾನೂನುಬದ್ಧ ಅರಿವು ಮೂಡಿಸುವ ಉದ್ದೇಶದಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ….
ಹಾವೇರಿ: ತಾಲೂಕಿನ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕುರಿ ಕಳ್ಳತನ ಪ್ರಕರಣವನ್ನು ಗುತ್ತಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳುವಾಗಿದ್ದ ಕುರಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪ್ರಕರಣವನ್ನು ಶೀಘ್ರವಾಗಿ ಭೇದಿಸಿ, ಕಳುವಾದ ಆಸ್ತಿಯನ್ನು ಮರುಪಡೆಯುವಲ್ಲಿ ಯಶಸ್ವಿಯಾದ ಗುತ್ತಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ…