ಹಾವೇರಿ: ನಗರದ ಟಿಎಮ್‌ಇಎ (TMEA) ಶಿಕ್ಷಣ ಸಂಸ್ಥೆಯ ಎದುರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳನ್ನು ಕಡ್ಡಾಯವಾಗಿ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (SFI) TMEA ಕಾಲೇಜು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ನಿಯಂತ್ರಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ TMEA ಶಿಕ್ಷಣ ಸಂಸ್ಥೆ ಎದುರು ಬಸ್‌ಗಳನ್ನು ಕಡ್ಡಾಯವಾಗಿ ನಿಲ್ಲಿಸದೆ ಚಾಲಕರು ವೇಗವಾಗಿ ಚಲಾಯಿಸುತ್ತಿದ್ದಾರೆ. ಪರಿಣಾಮ, ಬಸ್ ಹತ್ತುವಾಗ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಈ…
ಹಾಸನ: ನಗರದ ಉದಯಗಿರಿ ಬಡಾವಣೆಯ ಮನೆಯೊಂದರಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿರುವ ಭೀಕರ ಘಟನೆ ಸಂಭವಿಸಿದೆ. ಘಟನೆಯಲ್ಲಿ ದಿವ್ಯಾಮಣಿ (55) ಹಾಗೂ ಅವರ ಮಗಳು ಮಾಲತಿ (25) ತೀವ್ರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಯ ಶೀಟ್‌ಗಳು ಧರಾಶಾಹಿಯಾಗಿದ್ದು, ಮನೆಯಲ್ಲಿದ್ದ ಗೃಹಬಳಕೆ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ದಿಢೀರ್ ಸಂಭವಿಸಿದ ಭಾರಿ ಸದ್ದಿನ ಸ್ಫೋಟದಿಂದ ಸುತ್ತಮುತ್ತಲ ನಿವಾಸಿಗಳು ತೀವ್ರ ಆತಂಕ ಹಾಗೂ ಗಾಬರಿಗೊಳಗಾದರು. …