ಕೊಟ್ಟೂರು: ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಕ್ಷಣವೇ ಆಡಳಿತಾತ್ಮಕ ಸುಧಾರಣೆಗಳನ್ನು ತರುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ವತಿಯಿಂದ ಮಂಗಳವಾರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು. ಗ್ರಾಮ ಮಟ್ಟದಲ್ಲಿ ಸಕಾಲಕ್ಕೆ ಅಭಿವೃದ್ಧಿ ಕಾರ್ಯಗಳು ಹಾಗೂ ಆಡಳಿತಾತ್ಮಕ ಬದಲಾವಣೆಗಳು ಆಗದಿದ್ದರೆ ಮುಂಬರುವ ದಿನಗಳಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಪಕ್ಷದ ಮುಖಂಡರು, ಆಡಳಿತ ವ್ಯವಸ್ಥೆಯು ಎಚ್ಚೆತ್ತುಕೊಂಡು…
ರಟ್ಟೀಹಳ್ಳಿ: ಪಟ್ಟಣದಾದ್ಯಂತ ಮುಖ್ಯ ರಸ್ತೆ ಹಾಗೂ ವಿವಿಧ ಓಣಿಗಳ ರಸ್ತೆಗಳು ತೀವ್ರವಾಗಿ ಹಾಳಾಗಿದ್ದು, ನಿತ್ಯ ಸಂಚರಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಬೇಸಿಗೆಯಲ್ಲಿ ಧೂಳಿನ ಅಭೂತಪೂರ್ವ ಕಿರಿಕಿರಿ ಒಂದೆಡೆಯಾದರೆ, ಮಳೆಗಾಲದಲ್ಲಿ ತಗ್ಗು-ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವುದು ಇಲ್ಲಿ ಸರ್ವೇ ಸಾಮಾನ್ಯವಾಗಿದೆ. ಸಂಚಾರಕ್ಕೆ ಸಂಚಕಾರ ತಂದ ತಗ್ಗು-ಗುಂಡಿಗಳು: ಪಟ್ಟಣದ ಪ್ರಮುಖ ರಸ್ತೆಗಳಾದ ಕುಮಾರೇಶ್ವರ ಹೈಸ್ಕೂಲ್ ರಸ್ತೆ, ಕುರಬಗೇರಿ ಓಣಿ, ತುಮ್ಮಿನಕಟ್ಟಿ ರಸ್ತೆ, ಸಂತೆ ರಸ್ತೆ, ಕೋಟೆ ಓಣಿ, ಟೀಪುನಗರ, ಬನಶಂಕರಿ ನಗರ,…