ಮೈಸೂರು: ಹೂಟಗಳ್ಳಿ ನಗರಸಭೆ ವ್ಯಾಪ್ತಿಯ ಹಿನಕಲ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಜಿ.ಟಿ. ದೇವೇಗೌಡ ಅವರ ಸಮ್ಮುಖದಲ್ಲಿ ಇಂದು ದಿಢೀರ್ ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಲಾಯಿತು. ಈ ವೇಳೆ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ನಿರ್ವಹಣೆ ಹಾಗೂ ಲಭ್ಯವಿರುವ ಮೂಲಸೌಕರ್ಯಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಯಿತು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶುಚಿಯಾದ ಮತ್ತು ಗುಣಮಟ್ಟದ ಆಹಾರವನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಲಾಯಿತು. ಕಾರ್ಮಿಕರು, ವಿದ್ಯಾರ್ಥಿಗಳು…
ಆನೇಕಲ್: ತಾಲ್ಲೂಕಿನ ದೊಮ್ಮಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಬೃಹತ್ ಓವರ್ ಹೆಡ್ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಕುಸಿದು ಬೀಳುವ ಭೀತಿ ಎದುರಾಗಿದೆ. ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಈ ಟ್ಯಾಂಕ್ ಅನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಸ್ಥಳೀಯ ಸಾರ್ವಜನಿಕರು ಹಾಗೂ ರೋಗಿಗಳ ಸಂಬಂಧಿಕರು ತೀವ್ರವಾಗಿ ಒತ್ತಾಯಿಸಿದ್ದಾರೆ. ಆಸ್ಪತ್ರೆಗೆ ನಿತ್ಯ ನೂರಾರು ರೋಗಿಗಳು, ಸಾರ್ವಜನಿಕರು ಹಾಗೂ ಸಿಬ್ಬಂದಿ ಭೇಟಿ ನೀಡುತ್ತಾರೆ. ಆಸ್ಪತ್ರೆಯ ಆವರಣದಲ್ಲೇ ಇರುವ ಈ ಶಿಥಿಲಗೊಂಡ ನೀರಿನ ಟ್ಯಾಂಕ್‌ನ ಸಿಮೆಂಟ್…