ಹೈದರಾಬಾದ್: ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನಕ್ಕೆ (TTD) ಕಲಬೆರಕೆ ತುಪ್ಪ ಪೂರೈಕೆ ಮಾಡಿರುವ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಪ್ರಮುಖ ಕಂಪನಿ ಪ್ರಮೋಟರ್ ಒಬ್ಬನನ್ನು ಬಂಧಿಸಿದೆ. ಎಂ/ಎಸ್ ಸುಕೃತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಮೋಟರ್ ಕೈಲಾಶ್ ಚಂದ್ ಮಂಗಲಾ ಬಂಧಿತ ಆರೋಪಿ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್ 19ರ ಅಡಿಯಲ್ಲಿ ಈತನನ್ನು ಬಂಧಿಸಲಾಗಿದ್ದು, ವಿಶಾಖಪಟ್ಟಣದಲ್ಲಿರುವ ಪಿಎಂಎಲ್‌ಎ ವಿಶೇಷ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ₹230…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಧೋಖಾದಾಯಕ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ದೊಡ್ಡಬೆಳವಂಗಲ ಸಮೀಪದ ಅಜ್ಜನಕಟ್ಟೆ ಗ್ರಾಮದ ನಿವಾಸಿ ಚಂದನ್ ಎಚ್ (23) ಸ್ಥಳದಲ್ಲೇ ಕೊನೆಯುಸಿರೆಳೆದ ದುರ್ದೈವಿ. ಬೈಕ್‌ನಲ್ಲಿದ್ದ ಮತ್ತೋರ್ವ ಯುವಕ ಚೇತನ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ…