ಕುಶಾಲನಗರ: ಅಪಾಯಕಾರಿ ಹಾಗೂ ಅಸುರಕ್ಷಿತ ರೀತಿಯಲ್ಲಿ ಟಿಂಬರ್ (ಮರ) ಹೇರಿಕೊಂಡು ಸಂಚರಿಸುತ್ತಿದ್ದ ನಾಲ್ಕು ಟಿಂಬರ್ ಲಾರಿಗಳನ್ನು ಕುಶಾಲನಗರ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ತೂಕ (ಓವರ್‌ಲೋಡ್) ಹಾಗೂ ಸಂಪೂರ್ಣ ಲಾರಿಯ ಮಿತಿಗಿಂತ ಹೊರಕ್ಕೆ ಚಾಚಿಕೊಂಡಿರುವ ರೀತಿಯಲ್ಲಿ ಅಪಾಯಕಾರಿಯಾಗಿ ಮರಗಳನ್ನು ತುಂಬಿಕೊಂಡು ಸಂಚರಿಸುತ್ತಿದ್ದಾಗ ಈ ಕ್ರಮ ಕೈಗೊಳ್ಳಲಾಗಿದೆ. ಕುಶಾಲನಗರ ಪೊಲೀಸ್ ನಿರೀಕ್ಷಕ ಪ್ರದೀಪ್ ಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸ್ ತಂಡ, ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ…
ಭದ್ರಾವತಿ: ಗಣಪತಿ ಮೂರ್ತಿ ವಿಸರ್ಜನೆಗೆ ತೆರಳಿದ್ದ ದ್ವಿತೀಯ ಬಿಕಾಂ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ದುರಂತ ಅಂತ್ಯ ಕಂಡಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ದೇವರಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಹಬ್ಬದ ಸಂಭ್ರಮದ ನಡುವೆಯೇ ಸಂಭವಿಸಿದ ಈ ಅಕಾಲಿಕ ಸಾವು ಕುಟುಂಬಸ್ಥರು, ಸ್ನೇಹಿತರು ಹಾಗೂ ಇಡೀ ದೇವರಳ್ಳಿ ಗ್ರಾಮವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಘಟನೆಯ ವಿವರ: ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ರಾಕೇಶ್ ಸೇರಿದಂತೆ ಐವರು ಯುವಕರ ತಂಡ ಗ್ರಾಮದ ಕೆರೆಗೆ ತೆರಳಿತ್ತು. ಮಧ್ಯರಾತ್ರಿ…