Skip to main content

Police Roundup

Day: October 2, 2026

ದೊಡ್ಡಬಳ್ಳಾಪುರ: ಕಸ ವಿಂಗಡಣಾ ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕ ಸಾವು

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಕಸ ವಿಂಗಡಣೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಭೀಕರವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಎಂ.ಎಸ್.ಜಿ.ಪಿ. (MSGP) ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ನಡೆದಿದೆ.   ​ಕಾಡತಿಪ್ಪೂರು ಮೂಲದ ಅರಸಮ್ಮ (45) ಮೃತಪಟ್ಟ ದುರ್ದೈವಿ. ಇವರು ಕಳೆದ ಮೂರ್ನಾಲ್ಕು ವರ್ಷಗಳಿಂದ ಈ ಘಟಕದಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು.   ​ಘಟನೆಯ ವಿವರ: ಬೆಂಗಳೂರು ನಗರದಿಂದ ತರಲಾಗುವ ತ್ಯಾಜ್ಯವನ್ನು ವಿಂಗಡಿಸುವ ಕಾರ್ಯದಲ್ಲಿ ಅರಸಮ್ಮ ಅವರು ಸಕ್ರಿಯರಾಗಿದ್ದರು. ಇಂದು ಬೆಳಿಗ್ಗೆ ವಾಡಿಕೆಯಂತೆ ಕಸ ವಿಂಗಡಣೆ…

Read More

ತಿರುಮಲಶೆಟ್ಟಿಹಳ್ಳಿಯಲ್ಲಿ ‘ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಚಾಲನೆ: ಡಾ. ವಾಸಂತಿ ಅಮರ್ IAS ರವರಿಂದ ಸ್ವತಃ ಶ್ರಮದಾನ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ತಾಲೂಕಿನ ಸಮೇತನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿರುಮಲಶೆಟ್ಟಿಹಳ್ಳಿಯಲ್ಲಿ ‘ಸ್ವಚ್ಛತೆಯೇ ಸೇವೆ 2026’ (Swachhata Hi Seva) ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಾಸಂತಿ ಅಮರ್ IAS ಅವರು ಸ್ವತಃ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ​ಕೇಂದ್ರ ಸರ್ಕಾರದ ಈ ಮಹತ್ವದ ಅಭಿಯಾನವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರ ಗಾಂಧಿ ಜಯಂತಿಯವರೆಗೆ ದೇಶಾದ್ಯಂತ ನಡೆಯುತ್ತಿದ್ದು, ಈ ವರ್ಷ “ಸ್ವಚ್ಛತೆಯಲ್ಲೇ ಸಹಭಾಗಿತ್ವ – ಸ್ವಚ್ಛ…

Read More

Solverwp- WordPress Theme and Plugin