ಆನೇಕಲ್: ನಿಯಮಗಳನ್ನು ಗಾಳಿಗೆ ತೂರಿ ಅನಧಿಕೃತವಾಗಿ ನಿರ್ಮಿಸುತ್ತಿದ್ದ ಅಕ್ರಮ ಬಹುಮಹಡಿ ಕಟ್ಟಡಗಳ ವಿರುದ್ಧ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದು, ಬೃಹತ್ ಕಾರ್ಯಾಚರಣೆ ನಡೆಸಿ ಒಟ್ಟು 18 ನಿರ್ಮಾಣ ಹಂತದ ಕಟ್ಟಡಗಳನ್ನು ಸೀಜ್ ಮಾಡಿದ್ದಾರೆ. Mn ತಾಲೂಕಿನ ಬ್ಯಾಗಡದೇನಹಳ್ಳಿ ವ್ಯಾಪ್ತಿಯ ‘ಇಡನ್ ಗಾರ್ಡನ್’, ‘ನಕ್ಷತ್ರ’ ಹಾಗೂ ‘ಸಾಯಿ ಗಾರ್ಡನ್’ ಬಡಾವಣೆಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುದ್ದಿ ಸ್ಪರ್ಶ ವಾಹಿನಿಯಲ್ಲಿ ಪ್ರಸಾರವಾದ ವಿಶೇಷ ವರದಿಗೆ ತಕ್ಷಣವೇ ಸ್ಪಂದಿಸಿದ ಅಧಿಕಾರಿಗಳ ತಂಡ, ಸ್ಥಳಕ್ಕೆ ಭೇಟಿ ನೀಡಿ ಅಕ್ರಮ…
ಆಳಂದ (ಕಲಬುರಗಿ): ಅಕ್ರಮವಾಗಿ ಕಾಳಸಂತೆಗೆ ಸಾಗಿಸುತ್ತಿದ್ದ ಅಕ್ಕಿ ತುಂಬಿದ ವಾಹನವನ್ನು ವಶಕ್ಕೆ ಪಡೆದು, ಲಂಚ ಪಡೆದು ಪ್ರಕರಣ ದಾಖಲಿಸದೇ ಬಿಟ್ಟು ಕಳುಹಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಆಳಂದ ಪೊಲೀಸ್ ಇನ್‌ಸ್ಪೆಕ್ಟರ್ ಶರಣಬಸಪ್ಪ ಕೋಡ್ಲಾ ಹಾಗೂ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಪದಕ ಪುರಸ್ಕೃತರಾಗಿದ್ದ ಸಿಪಿಐ ಶರಣಬಸಪ್ಪ ಕೋಡ್ಲಾ ಅವರನ್ನು ಈಶಾನ್ಯ ವಲಯದ ಐಜಿಪಿ ಶಾಂತನು ಸಿನ್ಹಾ ಅವರು ಅಮಾನತುಗೊಳಿಸಿದ್ದಾರೆ. ಅಲ್ಲದೆ, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕಾನ್‌ಸ್ಟೆಬಲ್‌ಗಳಾದ ಹಣಮಂತ, ಮಲ್ಲಿಕಾರ್ಜುನ…