ಆನೇಕಲ್: ಕಳೆದ ಮಾರ್ಚ್ ತಿಂಗಳಲ್ಲಿ ನಡೆದಿದ್ದ ಕೋಲಾಹಲ ಸೃಷ್ಟಿಸಿದ ಗೋಪಾಲ್ @ ಗೋಪಿ ಕೊಲೆ ಪ್ರಕರಣದ ಪ್ರಮುಖ ಹಾಗೂ ನಟೋರಿಯಸ್ ಸುಪಾರಿ ಕಿಲ್ಲರ್, ರೌಡಿ ಶೀಟರ್ ಹರೀಶ್ @ ಹಂದಿ ಹರಿ ಕೊನೆಗೂ ಬರೋಬ್ಬರಿ ಆರು ತಿಂಗಳ ಬಳಿಕ ಪೊಲೀಸರ ಅತಿಥಿಯಾಗಿದ್ದಾನೆ. ತಲೆಮರೆಸಿಕೊಂಡಿದ್ದ ಆರೋಪಿ ಕೋರ್ಟಿಗೆ ಶರಣಾಗಿದ್ದು, ಆನೇಕಲ್ ಪೊಲೀಸರು ಆತನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ಸಿಐಡಿ (CID) ತಂಡಕ್ಕೆ ಹಸ್ತಾಂತರಿಸಿದ್ದಾರೆ. ಘಟನೆಯ ಹಿನ್ನೆಲೆ: ಆನೇಕಲ್ ತಾಲೂಕಿನ ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಎಂಬುವರು…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋವೊಂದು ತೀವ್ರ ರಾಜಕೀಯ ಸಂಚಲನ ಮೂಡಿಸಿದೆ. ಈ ವಿಡಿಯೋದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣದ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಲಾಗಿದೆ. ದೂರಿನ ವಿವರ: ‘ನೈಜ ಹೋರಾಟಗಾರರ ವೇದಿಕೆ’ಯ ಎಚ್.ಎಂ. ವೆಂಕಟೇಶ್ ಅವರು ವಿಡಿಯೋಗಳನ್ನು ಪೆನ್ಡ್ರೈವ್ನಲ್ಲಿ ಸಂಗ್ರಹಿಸಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಹೈಕೋರ್ಟ್ನ ಜುವೆನೈಲ್ ಜಸ್ಟಿಸ್ ಕಮಿಟಿ ಅಧ್ಯಕ್ಷರು ಹಾಗೂ…