ಯಾದಗಿರಿ/ರಾಯಚೂರು: ಸಿಎ (Civic Amenity) ನಿವೇಶನವನ್ನು ವಾಣಿಜ್ಯ ನಿವೇಶನವಾಗಿ ಪರಿವರ್ತಿಸಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಾನ್ವಿ ನಗರಾಭಿವೃದ್ಧಿ ಪ್ರಾಧಿಕಾರದ ಹೆಚ್ಚುವರಿ ಜವಾಬ್ದಾರಿ ಹೊಂದಿರುವ ಅಧಿಕಾರಿ ಶರಣಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಯಾದಗಿರಿಯಲ್ಲಿ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ದೂರುದಾರ ಸಂತೋಷ್ ಎಂಬವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣದ ಹಿನ್ನೆಲೆ ಏನು? ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶರಣಪ್ಪ ಅವರು, ರಾಯಚೂರು ಜಿಲ್ಲೆಯ ಮಾನ್ವಿ ನಗರಾಭಿವೃದ್ಧಿ ಪ್ರಾಧಿಕಾರದ…
ಕುಂದಾಪುರ:ಉಡುಪಿ ಜಿಲ್ಲೆಯ ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5 ಸಾವಿರ ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ, ಕುಂದಾಪುರ ತಾಲೂಕು ಕಚೇರಿಯ ಗ್ರಾಮ ಆಡಳಿತಾಧಿಕಾರಿ (ವಿಎ) ಹರೀಶ್ ಎಸ್. ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಕಚೇರಿಯಲ್ಲೇ ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ ಏನು? ಕಂಡ್ಲೂರಿನಲ್ಲಿ ಹೋಂ ಸ್ಟೇ ನಿರ್ಮಾಣಕ್ಕೆ ಎನ್‌ಒಸಿ ಕೋರಿ ಸುರೇಶ್ ಎಂಬವರು ಅರ್ಜಿ ಸಲ್ಲಿಸಿದ್ದರು. ಈ ಪ್ರಮಾಣಪತ್ರ ನೀಡಲು ಗ್ರಾಮ ಆಡಳಿತಾಧಿಕಾರಿ ಹರೀಶ್ ಎಸ್. ಅವರು ₹5 ಸಾವಿರ…