ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದ್ದು, ನಾಡಹಬ್ಬವನ್ನು ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಮತ್ತು ಸಾರ್ವಜನಿಕರು ಹರಿದುಬರುತ್ತಿದ್ದಾರೆ. ಆದರೆ, ಇದೇ ಸಂದರ್ಭದಲ್ಲಿ ಮಡಿಕೇರಿ ನಗರಸಭೆಯ ಸಿಬ್ಬಂದಿಯ ಬೇಜವಾಬ್ದಾರಿ ಹಾಗೂ ಅವೈಜ್ಞಾನಿಕ ಕೆಲಸದಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಒಂದೇ ಒಂದು ಮನೆಗೆ ನೀರು ಸರಬರಾಜಾಗುತ್ತಿಲ್ಲ ಎಂಬ ಕಾರಣಕ್ಕೆ ಇಡೀ ರಸ್ತೆಯನ್ನೇ ಅಗೆದು ಹಾಳು ಮಾಡಿರುವ ನಗರಸಭೆ ಸಿಬ್ಬಂದಿಯ ಕಾರ್ಯವೈಖರಿ ಈಗ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ…
ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್ ಸ್ಪೋಟದಲ್ಲಿ ಉತ್ತರ ಭಾರತ ಮೂಲದ ಆರು ಮಂದಿ ಸೆಂಟ್ರಿಂಗ್ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಆನೇಕಲ್ ಪಟ್ಟಣದ ಅತ್ತಿಬೆಲೆ ರಸ್ತೆಯ ಶ್ರೀಸಾಯಿ ಆಶೀರ್ವಾದ ಬಡಾವಣೆಯಲ್ಲಿರುವ ಸ್ಥಳೀಯ ನಿವಾಸಿ ಮಂಜುನಾಥ್ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯ ವಿವರ: ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಸಂಜಯ್, ಬೋರೋ ಹಾಗೂ ಮಧ್ಯಪ್ರದೇಶದ ದೀರು, ವಿಜಯ್,…