ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಾಂಗ್ಲಾದೇಶ ಮೂಲದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ವಶಕ್ಕೆ ಪಡೆಯಲಾದ ವ್ಯಕ್ತಿಗಳು. ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್‌ನಲ್ಲಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸವಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಗಡಿಪಾರು ಪ್ರಕ್ರಿಯೆ ಆರಂಭ: ವಶಕ್ಕೆ ಪಡೆದ ಇಬ್ಬರೂ…
ಬಳ್ಳಾರಿ: ‘ಲಕ್ಷ್ಮೀ ಪೂಜೆ ಮಾಡಿದರೆ ಹಣದ ಮಳೆ ಸುರಿಯುತ್ತದೆ’ ಎಂಬ ಮೂಢನಂಬಿಕೆ ಹಾಗೂ ಹಣದ ಆಮಿಷವೊಡ್ಡಿ ಬಡ ಕುಟುಂಬದ ಯುವತಿಯರನ್ನು ವೇಶ್ಯಾವಾಟಿಕೆ ಜಾಲಕ್ಕೆ ದೂಡುತ್ತಿದ್ದ ಅಂತಾರಾಜ್ಯ ಜಾಲವೊಂದನ್ನು ಬಳ್ಳಾರಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ‘ಅಕ್ಕ ಪಡೆ’ಯ (Akka Squad) ಮಹಿಳಾ ಪೊಲೀಸರು ಎರಡು ತಿಂಗಳ ಕಾಲ ನಡೆಸಿದ ರಹಸ್ಯ ಕಾರ್ಯಾಚರಣೆಯ ಫಲವಾಗಿ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ. ವಂಚನೆಯ ಜಾಲ ಹೇಗಿತ್ತು? ಆರೋಪಿಗಳು ಯುವತಿಯರನ್ನು ಆಯ್ಕೆ ಮಾಡಲು ನಿರ್ದಿಷ್ಟ ಮಾನದಂಡಗಳನ್ನು…