Skip to main content

Police Roundup

ಲೋಕಾಯುಕ್ತ ಬಲೆಗೆ ಗ್ರಾ.ಪಂ. ಬಿಲ್ ಕಲೆಕ್ಟರ್: ಇ-ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದಾಗ ದಾಳಿ

Share News

ಚಿಕ್ಕಬಳ್ಳಾಪುರ: ಇ-ಖಾತೆಯಲ್ಲಿ ಹೆಸರು ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

 

​ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ದ್ಯಾವಪ್ಪ.ಸಿ ಲೋಕಾಯುಕ್ತ ದಾಳಿಗೆ ಒಳಗಾದವರು. ಇವರು ಅಶ್ವಥ್ ಎಂಬುವವರಿಗೆ ಸೇರಿದ ಇ-ಖಾತೆಯ ಹೆಸರು ಬದಲಾವಣೆ ಮಾಡಿಕೊಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

 

​ಪೋನ್ ಪೇ ಮೂಲಕ ಲಂಚ ಸ್ವೀಕಾರ:
ಆರೋಪಿ ದ್ಯಾವಪ್ಪ ನೇರವಾಗಿ ಹಣ ಪಡೆಯುವ ಬದಲಿಗೆ, ಜಲಗಾರ ರಾಜಪ್ಪ ಎಂಬುವವರ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳಲು ಸಂಚು ರೂಪಿಸಿದ್ದರು. ಅದರಂತೆ ರಾಜಪ್ಪ ಅವರ ಪೋನ್ ಪೇ ಖಾತೆಗೆ 9,500 ರೂಪಾಯಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಚಿಕ್ಕಬಳ್ಳಾಪುರ ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ, ಇನ್ಸ್‌ಪೆಕ್ಟರ್ ಶಿವರಾಜ್ ಮತ್ತು ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
​ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರನ್ನು ಪೀಡಿಸುವ ಭ್ರಷ್ಟ ಅಧಿಕಾರಿಗಳಿಗೆ ಈ ದಾಳಿಯು ಎಚ್ಚರಿಕೆಯ ಗಂಟೆಯಾಗಿದೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin