Police Roundup

ಮೈಸೂರಿನಲ್ಲಿ ಅಬಕಾರಿ ಇಲಾಖೆ ದಿಢೀರ್ ದಾಳಿ: ಅನುಮಾನಾಸ್ಪದ ಸ್ಥಳಗಳ ಮೇಲೆ ಅಧಿಕಾರಿಗಳ ಕಣ್ಣು

Share News

ಮೈಸೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಅಬಕಾರಿ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಸಂಚಲನ ಮೂಡಿಸಿದರು. ನಗರದ ಪ್ರಮುಖ ಬಡಾವಣೆಗಳು ಹಾಗೂ ಕೈಗಾರಿಕಾ ಪ್ರದೇಶಗಳ ಸುತ್ತಮುತ್ತಲಿರುವ ಅನುಮಾನಾಸ್ಪದ ಸ್ಥಳಗಳ ಮೇಲೆ ಈ ಕಾರ್ಯಾಚರಣೆ ನಡೆಯಿತು.

 

ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತಲಿನ ಪ್ರದೇಶಗಳು, ಎನ್.ಆರ್. ಮೊಹಲ್ಲಾ ಹಾಗೂ ಸಿ.ವಿ. ಮೊಹಲ್ಲಾಗಳಲ್ಲಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಪ್ರಮುಖ ಗೋಡೌನ್‌ಗಳು ಹಾಗೂ ಗುಜರಿ ಅಂಗಡಿಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಅಕ್ರಮ ಮದ್ಯ ಸಂಗ್ರಹಣೆ ಅಥವಾ ಮಾದಕ ವಸ್ತುಗಳ ವಹಿವಾಟು ನಡೆಯುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಈ ತಪಾಸಣೆ ಕೈಗೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.

 

ಅಬಕಾರಿ ಉಪ ಅಧೀಕ್ಷಕರಾದ ಹೆಚ್.ಕೆ. ಲೋಕೇಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸುದೀರ್ಘ ಪರಿಶೀಲನೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಬಂದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆಸಲಾಗಿತ್ತು. ಆದರೆ, ಪರಿಶೀಲನೆಯ ವೇಳೆ ಯಾವುದೇ ಅಕ್ರಮ ಅಬಕಾರಿ ವಸ್ತುಗಳಾಗಲಿ ಅಥವಾ ಮಾದಕ ವಸ್ತುಗಳಾಗಲಿ ಪತ್ತೆಯಾಗಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

​ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲೂ ಇಂತಹ ದಿಢೀರ್ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಇಲಾಖೆಯು ಎಚ್ಚರಿಕೆ ನೀಡಿದೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin