Police Roundup

ಹಾಸನ: ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೆ ಸಾವು

Share News

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧವೊಂದು ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ನಡೆದಿದೆ. ಲೈಂಗಿಕ ಸಂಪರ್ಕಕ್ಕೆ ಒಪ್ಪದ ಕಾರಣಕ್ಕೆ ಆರೋಪಿಯೊಬ್ಬ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

 

ಮೃತ ಮಹಿಳೆಯನ್ನು ರಮ್ಯಾ.ಎ.ಆರ್. (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ರಮ್ಯಾ, ಕಳೆದ ಏಪ್ರಿಲ್ 28ರಂದು ತಮ್ಮ ಅತ್ತೆ ಕಾಳಮ್ಮನವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದರು. ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಇವರು, ಅದೇ ಗ್ರಾಮದ ಚಂದ್ರ (41) ಎಂಬಾತನೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

 

ಅತ್ತೆಯ ಅಂತ್ಯಸಂಸ್ಕಾರ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಚಂದ್ರ, ರಮ್ಯಾಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಆದರೆ ಇದಕ್ಕೆ ರಮ್ಯಾ ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ಆರೋಪಿ ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಗುಪ್ತಾಂಗದ ಮೇಲೆ ಒದ್ದಿದ್ದಾನೆ. ಈ ಭೀಕರ ಹಲ್ಲೆಯಿಂದಾಗಿ ಏಪ್ರಿಲ್ 30ರಂದು ರಮ್ಯಾ ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ.

 

ತೀವ್ರ ಅಸ್ವಸ್ಥಗೊಂಡಿದ್ದ ರಮ್ಯಾ ಅವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹಲ್ಲೆಯ ತೀವ್ರತೆಗೆ ಒಳಗಾಗಿದ್ದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ನಂತರ ಆರೋಪಿ ಚಂದ್ರ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.

​ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೈಂಗಿಕ ಹಸಿವಿಗಾಗಿ ಮಹಿಳೆಯೊಬ್ಬರ ಮೇಲೆ ಈ ಮಟ್ಟದ ಕ್ರೌರ್ಯ ಮೆರೆದಿರುವ ಆರೋಪಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin