Police Roundup

ಬೆಳಗಾವಿ ಪೊಲೀಸರ ಮಿಂಚಿನ ಕಾರ್ಯಾಚರಣೆ: ಕಳ್ಳತನವಾಗಿದ್ದ ಕಾರು ಕೇವಲ 24 ಗಂಟೆಯಲ್ಲೇ ಮುಂಬೈನಲ್ಲಿ ಪತ್ತೆ!

Share News

ಬೆಳಗಾವಿ: ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ದುಬಾರಿ ಕಾರನ್ನು ಪೊಲೀಸರು ಕೇವಲ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆ ಹಚ್ಚುವ ಮೂಲಕ ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 29 ಲಕ್ಷ ರೂ. ಮೌಲ್ಯದ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

ಬೆಳಗಾವಿ ನಗರದ ನಿವಾಸಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾಗಿರುವ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಾಂಭೀರ್ಯವನ್ನು ಅರಿತ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ತನಿಖೆ ಆರಂಭಿಸಿದ್ದರು. ತಾಂತ್ರಿಕ ಸಹಾಯ ಮತ್ತು ನೆರೆ ರಾಜ್ಯದ ಪೊಲೀಸರ ಸಮನ್ವಯದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ, ಕಳ್ಳತನವಾದ ಕಾರು ಮುಂಬೈನಲ್ಲಿದೆ ಎಂದು ಪತ್ತೆಹಚ್ಚಿ, 24 ಗಂಟೆಯೊಳಗೆ ಅದನ್ನು ವಶಕ್ಕೆ ಪಡೆದಿದ್ದಾರೆ.

 

ಇದೇ ಕಾರ್ಯಾಚರಣೆಯ ವೇಳೆ ಧಾರವಾಡದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮತ್ತೊಂದು ‘ಹುಂಡೈ’ ಕಂಪನಿಯ ಕಾರನ್ನು ಸಹ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಶಪಡಿಸಿಕೊಳ್ಳಲಾದ ಈ ಎರಡೂ ಕಾರುಗಳ ಒಟ್ಟು ಮೌಲ್ಯ ಅಂದಾಜು 29,00,000 ರೂ. ಎಂದು ತಿಳಿದುಬಂದಿದೆ.

 

ಪೊಲೀಸರ ಬಲೆಗೆ ಬೀಳುವ ಭೀತಿಯಿಂದ ಆರೋಪಿಗಳು ಕದ್ದ ಕಾರುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರಸ್ತುತ ಪೊಲೀಸರು ಆರೋಪಿಗಳ ಗುರುತು ಪತ್ತೆ ಹಚ್ಚಿದ್ದು, ಬಂಧನಕ್ಕಾಗಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

​ಬೆಳಗಾವಿ ಪೊಲೀಸರ ಈ ಸಮಯಪ್ರಜ್ಞೆ ಮತ್ತು ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

 

 

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin