Skip to main content

Police Roundup

ಮೈಸೂರು: ದೇವರಾಜ ಪೊಲೀಸರ ಯಶಸ್ವಿ ಕಾರ್ಯಾಚರಣೆ – ಸಾರ್ವಜನಿಕರ 27 ಕಳೆದುಹೋದ ಮೊಬೈಲ್‌ಗಳು ವಾರಸುದಾರರಿಗೆ ಹಸ್ತಾಂತರ

Share News

ಮೈಸೂರು: ನಗರದ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಿರುವ ಬಗ್ಗೆ ನೀಡಿ ದೂರಿನ ಮೇರೆಗೆ, ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ನೀಡಿದ್ದಾರೆ.

 

​ದೂರು ಸ್ವೀಕರಿಸಿದ ದೇವರಾಜ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡವು CEIR (Central Equipment Identity Register) ಪೋರ್ಟಲ್‌ನ ತಾಂತ್ರಿಕ ನೆರವನ್ನು ಬಳಸಿಕೊಂಡು ತೀವ್ರ ಶೋಧ ನಡೆಸಿದರು. ಈ ಮೂಲಕ ಒಟ್ಟು 27 ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

​ಪತ್ತೆಯಾದ ಎಲ್ಲಾ 27 ಮೊಬೈಲ್ ಫೋನ್‌ಗಳನ್ನು ಕಾನೂನು ಪ್ರಕ್ರಿಯೆ ಮುಗಿಸಿ, ಸೂಕ್ತ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ವಾರಸುದಾರರ ವಶಕ್ಕೆ ನೀಡಲಾಯಿತು. ಕಳೆದುಹೋಗಿದ್ದ ತಮ್ಮ ಅತ್ಯಮೂಲ್ಯ ಮೊಬೈಲ್ ಫೋನ್‌ಗಳು ಮರಳಿ ಸಿಕ್ಕಿದ್ದಕ್ಕೆ ಸಾರ್ವಜನಿಕರು ದೇವರಾಜ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿಯನ್ನು ಶ್ಲಾಘಿಸಿ, ಧನ್ಯವಾದ ಅರ್ಪಿಸಿದ್ದಾರೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin