Skip to main content

Police Roundup

ಜೆ.ಪಿ.ನಗರದಲ್ಲಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ₹31.56 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ, ಆರೋಪಿ ಬಂಧನ

Share News

ಬೆಂಗಳೂರು: ನಗರದ ಜೆ.ಪಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ವಿಭಾಗದ ಪೊಲೀಸರು, ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

​ಬಂಧಿತ ಆರೋಪಿಯಿಂದ ₹31.56 ಲಕ್ಷ ಮೌಲ್ಯದ 225 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.

 

​ದಕ್ಷಿಣ ವಿಭಾಗದ ಉನ್ನತಾಧಿಕಾರಿಗಳ ಮಾರ್ಗದರ್ಶನದಲ್ಲಿ, ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ ಜೆ.ಪಿ.ನಗರ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡವು ಈ ಶ್ಲಾಘನೀಯ ಕಾರ್ಯಾಚರಣೆಯನ್ನು ನಡೆಸಿದೆ. ಪೊಲೀಸರ ಈ ದಕ್ಷ ಹಾಗೂ ತರಿತ ಕಾರ್ಯವೈಖರಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

 

​ಸಾರ್ವಜನಿಕರ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಪಡೆ ಸದಾ ಜಾಗೃತವಾಗಿದ್ದು, ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಇಲಾಖೆ ತಿಳಿಸಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin