Skip to main content

Police Roundup

ಮೈಸೂರು ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ 70 ಪ್ರೊಬೇಷನರಿ ಪಿಎಸ್‌ಐಗಳ ಅಧ್ಯಯನ ಭೇಟಿ

Share News

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) 70 ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಪ್ರಶಿಕ್ಷಣಾರ್ಥಿಗಳು ದಿನಾಂಕ 25.07.2026ರಂದು ಮೈಸೂರು ನಗರದ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ (Special Juvenile Police Unit – SJPU) ಅಧ್ಯಯನ ಭೇಟಿ ನೀಡಿದರು.

 

ಈ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಸಿಸಿಬಿ ಎಸಿಪಿ (CCB ACP) ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಯವರು ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಪ್ರಮುಖ ಉದ್ದೇಶ, ಅದರ ಸ್ವರೂಪ ಹಾಗೂ ದೈನಂದಿನ ಕಾರ್ಯವೈಖರಿಯ ಕುರಿತು ಸಮಗ್ರವಾದ ಮಾಹಿತಿ ನೀಡಿದರು.

 

​ಮಕ್ಕಳ ಹಕ್ಕುಗಳ ರಕ್ಷಣೆ, ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸಂಕಷ್ಟದಲ್ಲಿರುವ ಮಕ್ಕಳಿಗೆ ಕಾನೂನುಬದ್ಧವಾಗಿ ನೆರವಾಗುವಲ್ಲಿ ಪೊಲೀಸ್ ಇಲಾಖೆಯ ಪಾತ್ರದ ಕುರಿತು ಪ್ರೊಬೇಷನರಿ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin