Skip to main content

Police Roundup

ಕಾರ್ಗಿಲ್ ಸ್ತೂಪದಲ್ಲಿ ಹುತಾತ್ಮ ಯೋಧರಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಂದ ಪುಷ್ಪಾಂಜಲಿ ನಮನ

Share News

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಇಂದು (ಜುಲೈ 26) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

 

​ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಹುತಾತ್ಮ ಯೋಧರ ಸ್ಮರಣಾರ್ಥ ಪುಷ್ಪಾಂಜಲಿ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, 24 ಎನ್‌ಸಿಸಿ (NCC) ಬಟಾಲಿಯನ್‌ನ ಅಧಿಕಾರಿಗಳು, ಕೆಡೆಟ್‌ಗಳು, ಮಾಜಿ ಸೈನಿಕರು, ವೀರ ನಾರಿಯರು, ವೀರ ಮಾತೆಯರು, ಹುತಾತ್ಮ ಯೋಧರ ಅವಲಂಬಿತರು ಹಾಗೂ ಸಾರ್ವಜನಿಕರು ಭಾಗವಹಿಸಿ ವೀರ ಯೋಧರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin