Skip to main content

Police Roundup

ಅವಲಹಳ್ಳಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ನಾಲ್ವರು ಆರೋಪಿಗಳ ಬಂಧನ, 1.14 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

Share News

ಅವಲಹಳ್ಳಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಅವಲಹಳ್ಳಿ ಪೊಲೀಸರು, ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

​ಬಂಧಿತ ಆರೋಪಿಗಳಿಂದ ಒಟ್ಟು 815.4 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಈ ಚಿನ್ನಾಭರಣಗಳ ಒಟ್ಟು ಅಂದಾಜು ಮೌಲ್ಯ ₹1,14,10,000/- (ಒಂದು ಕೋಟಿ ಹದಿನಾಲ್ಕು ಲಕ್ಷ ಹತ್ತು ಸಾವಿರ ರೂಪಾಯಿ) ಎಂದು ಅಂದಾಜಿಸಲಾಗಿದೆ.

 

​ಅಷ್ಟೇ ಅಲ್ಲದೆ, ಆರೋಪಿಗಳ ವಶದಲ್ಲಿದ್ದ ₹9,50,000/- (ಒಂಬತ್ತು ಲಕ್ಷ ಐವತ್ತು ಸಾವಿರ ರೂಪಾಯಿ) ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ/ಕಳವು ಮಾಡಿದ್ದ ಸುಮಾರು ₹5,00,000/- (ಐದು ಲಕ್ಷ ರೂಪಾಯಿ) ಮೌಲ್ಯದ 03 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

 

​ಅವಲಹಳ್ಳಿ ಪೊಲೀಸರ ಈ ಸಮಯೋಚಿತ ಕಾರ್ಯಾಚರಣೆಯಿಂದ ಎರಡು ಪ್ರಮುಖ ಕಳ್ಳತನ ಪ್ರಕರಣಗಳು ತಾರ್ಕಿಕ ಅಂತ್ಯ ಕಂಡಿದ್ದು, ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin