Skip to main content

Police Roundup

​ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ‘ನಾಗರಿಕ ಬಂದೂಕು ತರಬೇತಿ’: ತರಬೇತಿದಾರರಿಗೆ ನೆನಪಿನ ಕಾಣಿಕೆ ಹಾಗೂ ಧೃಡೀಕರಣ ಪತ್ರ ಸನ್ಮಾನ!

Share News

ಹಾವೇರಿ: ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ನೆರವೇರಿತು.

 

​ಕಾರ್ಯಕ್ರಮದಲ್ಲಿ ಭಾಗವಹಿಸಿದ ಉನ್ನತ ಅಧಿಕಾರಿಗಳು ಹಾಗೂ ಗಣ್ಯರು ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಧೃಡೀಕರಣ ಪತ್ರ (ಪ್ರಮಾಣಪತ್ರ) ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಿ ಶುಭಾಶಯ ಕೋರಿದರು.

 

​ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, “ನಾಗರಿಕರಿಗೆ ಬಂದೂಕು ಸುರಕ್ಷತಾ ನಿಯಮಗಳು, ಜವಾಬ್ದಾರಿಯುತ ಬಳಕೆ ಹಾಗೂ ಕಾನೂನುಬದ್ಧ ಅರಿವು ಮೂಡಿಸುವ ಉದ್ದೇಶದಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ತರಬೇತಿ ಪಡೆದ ಪ್ರತಿಯೊಬ್ಬರೂ ಶಿಸ್ತು, ಸುರಕ್ಷತೆ ಮತ್ತು ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಸಲಹೆ ನೀಡಿದರು.

 

​ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು, ತರಬೇತಿದಾರರು ಮತ್ತು ಆಹ್ವಾನಿತ ಗಣ್ಯರು ಉಪಸ್ಥಿತರಿದ್ದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin