ಕರ್ನಾಟಕ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ.) ವತಿಯಿಂದ ಬೆಳಗಾವಿಯ ಶ್ರೀ ಮಹೇಶ್ ಎಸ್/o ಮಂಜುನಾಥ್ ಶರ್ಮಾ ಅವರನ್ನು ಸಂಘಟನೆಯ ರಾಜ್ಯ ಮಾಧ್ಯಮ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಭೀಮಪುತ್ರಿ ನಾಗಮ್ಮ ಅವರು ಈ ನೂತನ ನೇಮಕಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಮಹೇಶ್ ಶರ್ಮಾ ಅವರ ನಾಯಕತ್ವ ಹಾಗೂ ಸಮಾಜಮುಖಿ ಚಿಂತನೆಗಳು ಸಂಘಟನೆಯ ಧ್ಯೇಯ-ಉದ್ದೇಶಗಳನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ತಲುಪಿಸಲು ನೆರವಾಗಲಿ ಎಂದು ಶುಭ ಹಾರೈಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಹಕ್ಕುಗಳ ರಕ್ಷಣೆ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂಘಟನೆ ನಡೆಸುತ್ತಿರುವ ಹೋರಾಟಕ್ಕೆ ಇವರ ಸೇರ್ಪಡೆಯಿಂದ ಇನ್ನಷ್ಟು ಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಸಂಘಟನೆಯ ರಾಜ್ಯಮಟ್ಟದ ಚಟುವಟಿಕೆಗಳು, ಸಾಮಾಜಿಕ ಸಮಸ್ಯೆಗಳು ಹಾಗೂ ಜನಪರ ವಿಚಾರಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ. ನೂತನವಾಗಿ ನೇಮಕಗೊಂಡ ಮಹೇಶ್ ಶರ್ಮಾ ಅವರಿಗೆ ಸಂಘಟನೆಯ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಶುಭ ಕೋರಿದ್ದಾರೆ.