ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಭಾಗದ ವಿವಿಧ ಗ್ರಾಮಗಳಲ್ಲಿ ಒಟ್ಟು ₹5.75 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಭೂಮಿಪೂಜೆ ನೆರವೇರಿಸಲಾಯಿತು.
ಕೊಡಿಗಿತಿರುಮಲಾಪುರ, ಹುರಳಿಚಿಕ್ಕನಹಳ್ಳಿ, ತೊರೆನಾಗಸಂದ್ರ, ಹೊಸಹಳ್ಳಿಪಾಳ್ಯ ಹಾಗೂ ಕಡಬಗೆರೆ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ಸಂಪರ್ಕ ಸುಧಾರಣೆ ಸೇರಿದಂತೆ ಹಲವು ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಮತ್ತು ಆಡಳಿತ ಯಂತ್ರ ಆದ್ಯತೆ ನೀಡುತ್ತಿದ್ದು, ಸಾರ್ವಜನಿಕರ ಬಹುದಿನಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.