Skip to main content

Police Roundup

ಹಾಸನ: ಉದಯಗಿರಿ ಬಡಾವಣೆಯಲ್ಲಿ ಸಿಲಿಂಡರ್ ಸ್ಫೋಟ — ತಾಯಿ, ಮಗಳಿಗೆ ಗಂಭೀರ ಗಾಯ, ಮನೆ ಧ್ವಂಸ!

Share News

ಹಾಸನ: ನಗರದ ಉದಯಗಿರಿ ಬಡಾವಣೆಯ ಮನೆಯೊಂದರಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿರುವ ಭೀಕರ ಘಟನೆ ಸಂಭವಿಸಿದೆ.

 

​ಘಟನೆಯಲ್ಲಿ ದಿವ್ಯಾಮಣಿ (55) ಹಾಗೂ ಅವರ ಮಗಳು ಮಾಲತಿ (25) ತೀವ್ರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಯ ಶೀಟ್‌ಗಳು ಧರಾಶಾಹಿಯಾಗಿದ್ದು, ಮನೆಯಲ್ಲಿದ್ದ ಗೃಹಬಳಕೆ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ದಿಢೀರ್ ಸಂಭವಿಸಿದ ಭಾರಿ ಸದ್ದಿನ ಸ್ಫೋಟದಿಂದ ಸುತ್ತಮುತ್ತಲ ನಿವಾಸಿಗಳು ತೀವ್ರ ಆತಂಕ ಹಾಗೂ ಗಾಬರಿಗೊಳಗಾದರು.

 

​ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ತಕ್ಷಣವೇ ಹಾಸನದ ಹಿಮ್ಸ್ (HIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

​ಈ ಕುರಿತು ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin