ದೊಡ್ಡಬೆಳವಂಗಲ: ದಾಬಸ್‌ಪೇಟೆ – ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಮೂಗೇನಹಳ್ಳಿ ಗೇಟ್ ಸಮೀಪ ಟೊಮೆಟೊ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಲಾರಿಯಲ್ಲಿದ್ದ ಅಪಾರ ಪ್ರಮಾಣದ ಟೊಮೆಟೊ ಸಂಪೂರ್ಣವಾಗಿ ರಸ್ತೆ ಪಾಲಾಗಿದ್ದು, ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.
ವಿಷಯ ತಿಳಿದ ಕೂಡಲೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆಯಲ್ಲಿದ್ದ ಲಾರಿ ಹಾಗೂ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದ ಟೊಮೆಟೊ ಟ್ರೇಗಳನ್ನು ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಹಾದಿ ಮಾಡಿಕೊಟ್ಟರು.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.