ಹಾಸನ: ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ನೇಣಿಗೆ ಶರಣಾಗಿರುವ ದುಃಖದ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ.
ವಿದ್ಯಾನಗರ ನಿವಾಸಿ ಅನಿಲ್ (35) ಆತ್ಮಹತ್ಯೆ ಮಾಡಿಕೊಂಡ ದುರದೃಷ್ಟಕರ ಯುವಕ.
ಘಟನೆಯ ವಿವರ:
ಅನಿಲ್ ಅವರು ಸುಮಾರು ನಾಲ್ಕು ಲಕ್ಷ ರೂಪಾಯಿಗೂ ಹೆಚ್ಚು ಕೈಸಾಲ ಮಾಡಿಕೊಂಡಿದ್ದರೆನ್ನಲಾಗಿದೆ. ಸಾಲ ತೀರಿಸಲು ಸಾಧ್ಯವಾಗದೇ ತೀವ್ರ ಮನನೊಂದಿದ್ದ ಅವರು, ಬೇರೆ ದಾರಿ ಕಾಣದೆ ಈ ಆತುರದ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.