Skip to main content

Police Roundup

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕ್ ಹಾಡು ಬಳಸಿ ವಿಡಿಯೋ ವೈರಲ್: ಯುವಕನ ಬಂಧನ

Share News

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ವೈರಿ ರಾಷ್ಟ್ರ ಪಾಕಿಸ್ತಾನದ ಪರವಾದ ಹಾಡನ್ನು ಬಳಸಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

​ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ನಗರದ ಟಿಪ್ಪು ನಗರ ನಿವಾಸಿ, 23 ವರ್ಷದ ಆಫ್ರಿದ್ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾರು ಶೋರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

 

​ಘಟನೆಯ ವಿವರ:

ಆರೋಪಿ ಆಫ್ರಿದ್ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ (Chikkamagaluru Power Tippu Boys) ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ಹೊಂದಿದ್ದು, ಅದರ ಮೂಲಕ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನಿ ಹಾಡನ್ನು ಹಿನ್ನೆಲೆಯಾಗಿ ಬಳಸಿ ವಿಡಿಯೋ ಮಾಡಿ ಅಪ್‌ಲೋಡ್ ಮಾಡಿದ್ದನೆಂದು ತಿಳಿದುಬಂದಿದೆ.

 

​ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಡಿಯೋ ಸೃಷ್ಟಿ ಮತ್ತು ಅದರ ಹಿನ್ನೆಲೆಯ ಕುರಿತಂತೆ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin