Skip to main content

Police Roundup

ದೊಮ್ಮಸಂದ್ರ: ಶಿಥಿಲಗೊಂಡ ಓವರ್ ಹೆಡ್ ನೀರಿನ ಟ್ಯಾಂಕ್ ತೆರವಿಗೆ ಸಾರ್ವಜನಿಕರ ಆಗ್ರಹ

Share News

ಆನೇಕಲ್: ತಾಲ್ಲೂಕಿನ ದೊಮ್ಮಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಬೃಹತ್ ಓವರ್ ಹೆಡ್ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಕುಸಿದು ಬೀಳುವ ಭೀತಿ ಎದುರಾಗಿದೆ. ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಈ ಟ್ಯಾಂಕ್ ಅನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಸ್ಥಳೀಯ ಸಾರ್ವಜನಿಕರು ಹಾಗೂ ರೋಗಿಗಳ ಸಂಬಂಧಿಕರು ತೀವ್ರವಾಗಿ ಒತ್ತಾಯಿಸಿದ್ದಾರೆ.

 

​ಆಸ್ಪತ್ರೆಗೆ ನಿತ್ಯ ನೂರಾರು ರೋಗಿಗಳು, ಸಾರ್ವಜನಿಕರು ಹಾಗೂ ಸಿಬ್ಬಂದಿ ಭೇಟಿ ನೀಡುತ್ತಾರೆ. ಆಸ್ಪತ್ರೆಯ ಆವರಣದಲ್ಲೇ ಇರುವ ಈ ಶಿಥಿಲಗೊಂಡ ನೀರಿನ ಟ್ಯಾಂಕ್‌ನ ಸಿಮೆಂಟ್ ಗಾರೆಗಳು ಉದುರಿ ಬೀಳುತ್ತಿದ್ದು, ಬೃಹತ್ ಬಿರುಕುಗಳು ಕಾಣಿಸಿಕೊಂಡಿವೆ. ಇದರಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.

 

​ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಪಂಚಾಯಿತಿ ಹಾಗೂ ತಾಲೂಕು ಆಡಳಿತ ಎಚ್ಚೆತ್ತುಕೊಂಡು, ಶಿಥಿಲಗೊಂಡಿರುವ ಈ ಓವರ್ ಹೆಡ್ ಟ್ಯಾಂಕ್ ಅನ್ನು ತಕ್ಷಣವೇ ತೆರವುಗೊಳಿಸಿ ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin