Skip to main content

Police Roundup

ಬೆಳಗಾವಿ: ಬಸ್‌ನಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಇಬ್ಬರು ಮಹಿಳಾ ಕಿಲಾಡಿಗಳ ಬಂಧನ

Share News

ಬೆಳಗಾವಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡುತ್ತಿದ್ದ ಕಿಲಾಡಿ ಮಹಿಳೆಯರ ಜಾಲವನ್ನು ಕಟಕೋಳ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.

 

​ಪ್ರಕರಣಕ್ಕೆ ಸಂಬಂಧಿಸಿದಂತೆ ಉಮಾ ವಿಶಾಲ ಚೌಗುಲೆ (40) ಹಾಗೂ ಆರತಿ ಶಿವಾ ಚೌಗುಲೆ (28) ಎಂಬ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

​ಘಟನೆಯ ವಿವರ:

ಸಂತ್ರಸ್ತರಾದ ಮಂಜುಳಾ ಹಾಗೂ ಸಿಂಧು ಎಂಬುವವರು ಇತ್ತೀಚೆಗೆ ಲೋಕಾಪುರದಿಂದ ಸಾಲಹಳ್ಳಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಗಮನ ಬೇರೆಡೆ ಸೆಳದು ಬ್ಯಾಗ್‌ನಲ್ಲಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಆರೋಪಿಗಳು ಕಳವು ಮಾಡಿದ್ದರು. ಈ ಕುರಿತು ದೂರು ದಾಖಲಿಸಿಕೊಂಡ ಕಟಕೋಳ ಪೊಲೀಸರು ತಕ್ಷಣ ಕಾರ್ಯಾಚರಣೆಗೆ ಇಳಿದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

​ಬಂಧಿತ ಆರೋಪಿಗಳು ಮರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮತ್ತೊಂದು ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಕಟಕೋಳ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin