Skip to main content

Police Roundup

ದಾಬಸ್‌ಪೇಟೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 600 ಜಿಲೆಟಿನ್ ಕಡ್ಡಿ, 100 ಡಿಟೋನೇಟರ್ ಜಪ್ತಿ, ಆರೋಪಿ ಶಂಕರ್ ಬಂಧನ

Share News

ದಾಬಸ್‌ಪೇಟೆ: ಅಕ್ರಮವಾಗಿ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ ಸಾಗಣೆ ಮಾಡುತ್ತಿದ್ದ ಜಾಲದ ಮೇಲೆ ದಾಬಸ್‌ಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿ ಶಂಕರ್ ಎಂಬಾತನನ್ನು ಬಂಧಿಸಿದ್ದಾರೆ. ಬಂದಿತನಿಂದ 600 ಜಿಲೆಟಿನ್ ಕಡ್ಡಿ ಹಾಗೂ 100 ಎಲೆಕ್ಟ್ರಿಕ್ ಡಿಟೋನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

 

​ಡಿವೈಎಸ್‌ಪಿ (DySP) ಉಮಾರಾಣಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ, ಆರೋಪಿಯು ಕೊರಟಗೆರೆಯಿಂದ ಜಾಜೂರಿನತ್ತ ಕಾರಿನಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ರೆಡ್‌ಹ್ಯಾಂಡಾಗಿ ಸೆರೆಹಿಡಿದಿದ್ದಾರೆ.

 

​ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಪಾಯಕಾರಿ ಸ್ಪೋಟಕಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಪೋಟಕ ವಸ್ತುಗಳನ್ನು ಎಲ್ಲಿಂದ ತರಲಾಗಿತ್ತು ಮತ್ತು ಯಾರಿಗೆ ಪೂರೈಸಲಾಗುತ್ತಿತ್ತು ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin