Skip to main content

Police Roundup

ರಾಜ್ಯದಲ್ಲಿ ಭೀಕರ ಬರ: ಸೆ.೯ ಕ್ಕೆ ಹಾವೇರಿ ಜಿಲ್ಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪ್ರವಾಸ, ರೈತರ ಸಮಸ್ಯೆ ಆಲಿಕೆ

Share News

ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಸೆಪ್ಟೆಂಬರ್ ೯ ರಂದು ಹಾವೇರಿ ಜಿಲ್ಲೆಯಲ್ಲಿ ಬರ ವೀಕ್ಷಣೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಡೊಳ್ಳಿನ ಮಾಹಿತಿ ನೀಡಿದ್ದಾರೆ.

 

​ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬಲ ತುಂಬುವುದು ಹಾಗೂ ಮುಂಬರುವ ಹೋರಾಟಗಳ ರೂಪುರೇಷೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ರೈತ ಸಂಘದ ರಾಜ್ಯ ಪದಾಧಿಕಾರಿಗಳ ನಿಯೋಗವು ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದೆ.

 

​ವಿವಿಧ ಜಿಲ್ಲೆಗಳ ಪ್ರವಾಸ ಪಟ್ಟಿ:

​ಸೆ. ೭: ಬಾಗಲಕೋಟೆ

​ಸೆ. ೮: ವಿಜಯಪುರ

​ಸೆ. ೯: ಹಾವೇರಿ

​ಸೆ. ೧೦: ಬೆಳಗಾವಿ

​ಸೆ. ೧೧: ಗದಗ

​ಸೆ. ೧೨: ಧಾರವಾಡ

 

​ಈ ಪ್ರವಾಸದಲ್ಲಿ ಕಾರ್ಯಾಧ್ಯಕ್ಷರಾದ ಭೀಮಸಿ ಗಡಾದಿ, ಕಲ್ಯಾಣಸಿಂಗ್, ಶಶಿಧರ, ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ. ಬಸವರಾಜ ಹಾವೇರಿ ಹಾಗೂ ಇತರ ಮುಖಂಡರು ಭಾಗವಹಿಸಲಿದ್ದಾರೆ. ಪ್ರವಾಸದ ವೇಳೆ ರೈತ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಮುಂದಿನ ಹೋರಾಟದ ಕುರಿತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಅನಿಲ್ ಡೊಳ್ಳಿನ ತಿಳಿಸಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin