ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್ನಿಂದ ಅಕ್ರಮವಾಗಿ ವಿವಿಧ ಜಾತಿಯ ಜೇಡಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ನಿಂದ ಏರ್ ಏಷ್ಯಾ ವಿಮಾನ (FD-137) ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಯಾಶರ್ ಸಾಮಿಯುಲ್ಲಾ ಶೆರೀಫ್ ಉಮೇರಾ ಬಾನು ಎಂಬ ಪ್ರಯಾಣಿಕನ ಚೆಕ್-ಇನ್ ಲಗೇಜ್ ಅನ್ನು ಪರಿಶೀಲಿಸಿದಾಗ ಈ ಅಪರೂಪದ ಜೇಡಗಳು ಪತ್ತೆಯಾಗಿವೆ.
ಘಟನೆಗೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳು ಸಾಗಣೆ ಮಾಡುತ್ತಿದ್ದ ಜೇಡಗಳನ್ನು ಜಪ್ತಿ ಮಾಡಿದ್ದು, ಆರೋಪಿಯ ವಿರುದ್ಧ ಅರಣ್ಯ ಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.